ಜೆಇಇ, ನೀಟ್ ಪರೀಕ್ಷೆಗಳಿಗೆ ಹಾಜರಾಗಲು ಪ್ರಯಾಣ ಮಾಡಬೇಕಾದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವ ಸೋನು ಸೂದ್

ಸಾಂಕ್ರಾಮಿಕ ರೋಗದ ಸಮಯದಲ್ಲಿ ಭಾರತದಾದ್ಯಂತ ಹಲವಾರು ವಲಸಿಗರಿಗೆ ಸಹಾಯ ಮಾಡಿದ ನಟ ಸೋನು ಸೂದ್, ಈಗ ವಿದ್ಯಾರ್ಥಿಳಿಗೆ ಜೆಇಇ, ನೀಟ್ ಪರೀಕ್ಷೆಗಳನ್ನು ಬರೆಯಲು ಪರೀಕ್ಷಾ ಕೇಂದ್ರಗಳನ್ನು ತಲುಪಲು ಸಹಾಯ ಮಾಡಲು ಮುಂದಾಗಿದ್ದಾರೆ.

ಜೆಇಇ, ನೀಟ್ ಪರೀಕ್ಷೆಗಳಿಗೆ ಹಾಜರಾಗಲು ಪ್ರಯಾಣ ಮಾಡಬೇಕಾದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವ ಸೋನು ಸೂದ್

Friday September 04, 2020,

1 min Read

ಕೊರೊನಾ ನಡುವೆ ನೂರಾರು ವಲಸಿಗರಿಗೆ ಸಹಾಯ ಮಾಡಿದ ನಟ ಸೋನು ಸೂದ್ ಈಗ ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದಾರೆ.


ಕೋವಿಡ್ 19 ಬಿಕ್ಕಟ್ಟಿನಿಂದಾಗಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ನಡೆಸುವ ಬಗೆಗಿನ ವಿವಾದದ ಹೊರತಾಗಿಯೂ, ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಇದರ ಅನುಸಾರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸೆಪ್ಟೆಂಬರ್‌ನಲ್ಲಿ ಎಲ್ಲ ಸುರಕ್ಷತಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆಗಳನ್ನು ನಡೆಸಲು ಸಜ್ಜಾಗಿದೆ ಎಂದು ದಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.



ಪರೀಕ್ಷೆ ಬರೆಯಲು ಸಹಾಯ ಮಾಡುವ ಉದ್ದೇಶದಿಂದಾಗಿ, ಸೋನು, “#NEET #JEE 2020 ರ ಪರೀಕ್ಷೆಗಳನ್ನು ಬರೆಯುತ್ತಿರುವ ವಿದ್ಯಾರ್ಥಿಗಳ ಜೊತೆ ನಾನಿದ್ದೇನೆ. ವಿದ್ಯಾರ್ಥಿಗಳು ಎಲ್ಲಿಯಾದರೂ ಸಿಲುಕಿಕೊಂಡಿದ್ದರೆ, ನನಗೆ ತಿಳಿಸಿ. ನಿಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಲು ನಾನು ನಿಮಗೆ ಸಹಾಯ ಮಾಡುತ್ತೇನೆ. ಸಂಪನ್ಮೂಲಗಳ ಕೊರತೆಯ ಕಾರಣ ಯಾರೂ ತಮ್ಮ ಪರೀಕ್ಷೆಯನ್ನು ಕಳೆದುಕೊಳ್ಳಬಾರದು,” ಎಂದು ಟ್ವೀಟ್‌ ಮಾಡಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ತಲುಪಲು ಇರುವ ತೊಂದರೆಗಳನ್ನು ಹಂಚಿಕೊಂಡ ವಿದ್ಯಾರ್ಥಿಗಳಿಂದ ಅನೇಕ ಪ್ರತಿಕ್ರಿಯೆಗಳು ಬಂದಿದ್ದು, ಟ್ವೀಟ್ ಈಗಾಗಲೇ 126 ಕೆ ಲೈಕ್‌ಗಳನ್ನು ಗಳಿಸಿದೆ. ಇದಲ್ಲದೆ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ, ಅವುಗಳಲ್ಲಿ ಹೆಚ್ಚಿನವರ ಲಕ್ಷಣರಹಿತರಾಗಿದ್ದು ಸೋಂಕನ್ನು ಹರಡಬಲ್ಲವರಾಗಿದ್ದಾರೆ.


ಕೆಲವು ದಿನಗಳ ಹಿಂದೆ ಬಿಹಾರ, ಅಸ್ಸಾಂ ಮತ್ತು ಗುಜರಾತ್‌ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ ಯುವಜನರನ್ನು ಈ ನಟ ನಿರ್ದಿಷ್ಟವಾಗಿ ತಲುಪಿ, ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಸಾರಿಗೆ ಸೌಲಭ್ಯಗಳಿಗೆ ಸಹಾಯ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.